ಕಳಸ: ಚಿಕ್ಕಮಗಳೂರು ಜಿಲ್ಲೆ ಕಳಸ ಉಪವಿಭಾಗದ ಮೆಸ್ಕಾಂ ಗ್ರಾಹಕರಿಗೆ ಮಾಹಿತಿ, ಕಳಸ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜೂನ್ 3ರಂದು ಮಧ್ಯಾಹ್ನ 3ಗಂಟೆಗೆ ಸರಿಯಾಗಿ ಜನಸಂಪರ್ಕ ಸಭೆಯನ್ನು ಆಯೋಜಿಸಲಾಗಿದೆ.
ಮೆಸ್ಕಾಂ ಚಿಕ್ಕಮಗಳೂರು ವೃತ್ತದ ಅಧೀಕ್ಷಕ ಇಂಜಿನಿಯರ್‌ರವರು ಈ ಮಹತ್ವದ ಸಭೆಯ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಸ್ಥಳೀಯ ಸಾರ್ವಜನಿಕರು ಮತ್ತು ಗ್ರಾಹಕರು ಈ ಸಭೆಯಲ್ಲಿ ಮುಕ್ತವಾಗಿ ಭಾಗವಹಿಸಲು ಅವಕಾಶವಿದ್ದು, ವಿದ್ಯುತ್ ಸಂಪರ್ಕ ಹಾಗೂ ಮೆಸ್ಕಾಂ ಸೇವೆಗಳಿಗೆ ಸಂಬಂಧಿಸಿದ ತಮ್ಮ ಯಾವುದೇ ರೀತಿಯ ಕುಂದುಕೊರತೆಗಳು ಮತ್ತು ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳಬಹುದು ಎಂದು ತಿಳಿಸಲಾಗಿದೆ.
ಈ ಸಭೆಗೆ ಭಾಗವಹಿಸುವಂತೆ ಕಳಸ ಮೆಸ್ಕಾಂ ಕಾರ್ಯ ಮತ್ತು ಪಾಲನಾ ಉಪವಿಭಾಗದ ಕಾರ್ಯ ನಿರ್ವಾಹಕ ಇಂಜಿನಿಯರ್‌ರವರು ಅಧಿಕೃತ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.
