ಚಿಕ್ಕಮಗಳೂರು ; ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 1 ಲಕ್ಷದ ಮೂವತ್ತೊಂದು ಸಾವಿರ ಹಣವನ್ನು ಚಿಕ್ಕಮಗಳೂರು ಜಿಲ್ಲೆಯ ಕಡೂರು ನಗರದ ಚೆಕ್ ಪೋಸ್ಟ್ನಲ್ಲಿ ವಶಕ್ಕೆ ಪಡೆದುಕೊಳ್ಳಲಾಗಿದೆ. ವಾಹನಗಳನ್ನು ತಪಾಸಣೆ ಮಾಡುತ್ತಿದ್ದಾಗ, ಕಾರ್ನಲ್ಲಿದ್ದ ಹಣವನ್ನು ಜಪ್ತಿ ಮಾಡಿದ್ದಾರೆ.
ಲೋಕಸಭಾ ಚುನಾವಣೆ ಹಿನ್ನಲೆ ದೇಶದೆಡೆ ನೀತಿ ಸಂಹಿತೆ ಜಾರಿಯಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಚೆಕ್ ಪೋಸ್ಟ್ಗಳಲ್ಲಿ ಪೋಲಿಸರು ವಾಹನಗಳನ್ನು ಪರೀಶಿಲಿಸಿ ದಾಖಲೆ ಇಲ್ಲದೇ ಸಾಗಿಸುವ ದುಬಾರಿ ಬೆಲೆ ವಸ್ತು , ಹಣಗಳನ್ನು ಪೊಲೀಸರು ವಶಪಡಿಸಿಕೊಳ್ಳುತ್ತಿದ್ದಾರೆ. ಈ ನಿಟ್ಟಿನಲ್ಲಿ ಕಡೂರು ನಗರದಲ್ಲಿ ಬಿಟ್ ಕರ್ತವ್ಯದಲ್ಲಿದ್ದ ಸಿಬ್ಬಂದಿಗಳಾದ Pc 168 ನವೀನ್, Pc31 ಗಿರೀಶ್ ರವರು ಅನುಮಾನಸ್ಪದ ವಾಗಿ ಓಡಾಡುತ್ತಿದ್ದ ವ್ಯಕ್ತಿಯನ್ನು ಪರಿಶೀಲಿಸಿ ಅಕ್ರಮವಾಗಿ ತನ್ನ ಬಳಿ ಇಟ್ಟುಕೊಂಡಿದ್ದ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
