Wednesday, October 14, 2026
Homeಇತರೆದತ್ತಪೀಠದಲ್ಲಿ ಶಾಖಾದ್ರಿ ಕುಟುಂಬ ಪ್ರತಿಭಟನೆ

ದತ್ತಪೀಠದಲ್ಲಿ ಶಾಖಾದ್ರಿ ಕುಟುಂಬ ಪ್ರತಿಭಟನೆ

Telegram Group
Join Now

ಚಿಕ್ಕಮಗಳೂರು: ದತ್ತಜಯಂತಿಗೆ

ದಿನಗಣನೆ ಆರಂಭವಾಗುತ್ತಿದ್ದಂತೆ, ಮತ್ತೆ ದತ್ತಪೀಠ ವಿವಾದ ಮುನ್ನೆಲೆಗೆ ಬಂದಿದೆ. ವಿವಾದಿತ ಗುಹೆಯೊಳಗಿರುವ ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ ಕೇಳಿಬಂದಿದ್ದು, ಇದು ಇಸ್ಲಾಂ ಧರ್ಮದವರ ಧಾರ್ಮಿಕ ಭಾವನೆಗಳಿಗೆ ಘಾಸಿಗೊಳಿಸುವ ಪ್ರಯತ್ನ ಎಂದು ಶಾಖಾದ್ರಿ ಕುಟುಂಬಸ್ಥರು ಆರೋಪಿಸಿದ್ದಾರೆ.

ತಾಲೂಕಿನ ಇನಾಂದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಎದುರು ಪ್ರತಿಭಟನೆ ನಡೆಸಿ, ಮುಜರಾಯಿ ಇಲಾಖೆಯ ಅಧಿಕಾರಿಗಳ ಜೊತೆ ವಾಗ್ವಾದಕ್ಕಿಳಿ ದಿದ್ದಾರೆ. ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ವಿವಾದಿತ ಗುಹೆಯೊಳಗಿರುವ ಗೋರಿಗಳಿಗೆ ಅಲ್ಲಿನಅರ್ಚಕರು

ಕುಂಕುಮ ಹಚ್ಚಿ ಪೂಜೆ ಮಾಡಿದ್ದಾರೆ. ಇದು ಮುಸ್ಲಿಂ ಸಮುದಾಯಕ್ಕೆ ವಿರುದ್ದವಾಗಿದೆ ಎಂದು ಇನಾಂ ದತ್ತಾತ್ರೇಯ ಬಾಬಾಬುಡನ್‌ ಸ್ವಾಮಿ ದರ್ಗಾ ಮುಂಭಾಗ ಶಾಖಾದ್ರಿ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ. ಆರೋಪಿಸಿ

ಕಳೆದ ಸೆಪ್ಟೆಂಬರ್‌ನಲ್ಲೇ ಕುಂಕುಮ ಹಚ್ಚಿ ಪೂಜೆ ಮಾಡಿದ್ದಕ್ಕೆ ಮುಸ್ಲಿಂ ಸಮುದಾಯ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ

ದೂರು ನೀಡಿದ್ದರು. ಆದರೆ ಇದೀಗ ಮತ್ತೆ ಕುಂಕುಮ ಹಚ್ಚಿ ಗೋರಿಗಳ ಪೂಜೆ ಮಾಡಿದಕ್ಕೆ ” ವಿರೋಧ ವ್ಯಕ್ತವಾಗಿದೆ.

ಸಂಪೂರ್ಣ ಹಿಂದೂ ಪೀಠಕ್ಕೆ ಆಗ್ರಹಿಸಿ ಡಿಸೆಂಬರ್ 6 ರಿಂದ 14 ರ ವರೆಗೆ ದತ್ತಜಯಂತಿ ನಡೆಯಲಿದೆ. ಈ ಮಧ್ಯೆ ಕುಂಕುಮ ವಿವಾದ ಶುರು ವಾಗಿದ್ದರಿಂದ ಹಿಂದೂ ಸಂಘಟನೆಗಳ ಮುಖಂಡರೊಂದಿಗೆ ಜಿಲ್ಲಾಡಳಿತ ಸಭೆ ನಡೆಸುವ ಸಾಧ್ಯತೆಗಳಿವೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!