ನವದೆಹಲಿ : ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಇಂದು ಸಂಭವಿಸಿದ ಕಾಲ್ತುಳಿದ ಬಗ್ಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದಾರೆ. ಈ ಅವಘಡಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ವೈಫಲ್ಯವೇ ಕಾರಣ ಅಂತ ಆರೋಪಿಸಿದ್ದಾರೆ.
ಮಹಾಕುಂಭ ಮೇಳದಲ್ಲಿ ವಿಐಪಿ ಸಂಪ್ರದಾಯಕ್ಕೆ ಲಗಾಮು ಹಾಕಬೇಕಿದೆ. ಭಕ್ತರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕಿದೆ ಎಂದು ಆಗ್ರಹಿಸಿದ್ದಾರೆ. ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ಕಾಲ್ತುಳಿತದಲ್ಲಿ ಹಲವರು ಮೃತಪಟ್ಟು, ಅನೇಕರು ಗಾಯಗೊಂಡಿರುವ ಸುದ್ದಿ ಅತ್ಯಂತ ದುಃಖಕರವಾಗಿದೆ. ಮೃತರಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ಸಾಮಾನ್ಯ ಭಕ್ತರಿಗೆ ಗಮನಕೊಡದೆ, ವಿಐಪಿಗಳ ಓಡಾಟದ ಬಗ್ಗೆ ವಿಶೇಷ ಆದ್ಯತೆ ಕೊಡುತ್ತಿರುವುದು ದುರಂತಕ್ಕೆ ಕಾರಣವಾಗಿದೆ. ಇನ್ನೂ ಅನೇಕ ದಿನದ ಕಾರ್ಯಕ್ರಮಗಳು ನಡೆಯಲಿದೆ. ಸರ್ಕಾರ ಇನ್ನಾದ್ರು ಎಚ್ಚೆತ್ತುಕೊಂಡು ವ್ಯವಸ್ಥೆಯಲ್ಲಿ ಸುಧಾರಣೆ ಮಾಡಲಿ ಎಂದು ಆಗ್ರಹಿಸಿದ್ದಾರೆ.