Friday, May 8, 2026
Homeಇತರೆಕಾಫಿತೋಟದಲ್ಲಿ ನಾಪತ್ತೆಯಾಗಿದ್ದ 1.5 ವರ್ಷದ ಗಂಡು ಮಗು: 12 ಗಂಟೆ ಕಾರ್ಯಾಚರಣೆ ನಡೆಸಿ ರಕ್ಷಣೆ

ಕಾಫಿತೋಟದಲ್ಲಿ ನಾಪತ್ತೆಯಾಗಿದ್ದ 1.5 ವರ್ಷದ ಗಂಡು ಮಗು: 12 ಗಂಟೆ ಕಾರ್ಯಾಚರಣೆ ನಡೆಸಿ ರಕ್ಷಣೆ

ಮೂಡಿಗೆರೆ: ಆಟವಾಡುವ ವೇಳೆ ಕಾಫಿ ತೋಟದಲ್ಲಿ ನಾಪತ್ತೆಯಾಗಿದ್ದ ಮಗುವನ್ನು 12 ಗಂಟೆ ಕಾರ್ಯಾಚರಣೆ ನಡೆಸಿ ಪೊಲೀಸರು ಪತ್ತೆ ಮಾಡಿರುವ ಘಟನೆ ಮೂಡಿಗೆರೆ ತಾಲೂಕಿನ ಕೆಳಗೂರು ಗ್ರಾಮದಲ್ಲಿ ನಡೆದಿದೆ.

ಹೌದು .. ಟೀ ಎಸ್ಟೇಟ್​ನಲ್ಲಿ ಕೆಲಸಕ್ಕೆ ಬಂದಿದ್ದ ಮಧ್ಯಪ್ರದೇಶ ಮೂಲದ ಗೋನು, ಸೋನು ದಂಪತಿಯ 1.5 ವರ್ಷದ ಗಂಡು ಮಗು ನಿನ್ನೆ ಸಂಜೆ ಕಳೆದುಹೋಗಿತ್ತು. ಮೂಡಿಗೆರೆ ಸಿಪಿಐ, ಬಾಳೂರು ಪಿಎಸ್​​ಐ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಮಗುವನ್ನು ಪತ್ತೆ ಹಚ್ಚುವಲ್ಲಿ ತಂಡ ಯಶಸ್ವಿಯಾಗಿದೆ.

ಮೂವರು ಮಕ್ಕಳ ಜೊತೆ ಆಡವಾಡುತ್ತಾ ಕಾಫಿ ತೋಟಕ್ಕೆ ಬಂದಿದ್ದ ಮಗು ನಾಪತ್ತೆಯಾಗಿತ್ತು. ತೀವ್ರ ಹುಡುಕಾಟದ ನಂತರ ಮಗು ಸುರಕ್ಷಿತವಾಗಿ ಪತ್ತೆಯಾಗಿದ್ದು, ಶೋಧ ನಡೆಸುವವರ ಕಣ್ಣಿಗೆ ಮಗು ಬೀಳುವಾಗ ಅದು ಮಲಗಿತ್ತು ಎಂಬುದು ಗೊತ್ತಾಗಿದೆ. ನಿನ್ನೆ ಸಂಜೆ ಕಳೆದುಹೋಗಿದ್ದ ಮಗುವನ್ನು ಸತತ ಕಾರ್ಯಾಚರಣೆ ನಡೆಸಿರುವ ಪೊಲೀಸರು ಇಂದು ಬೆಳಗ್ಗೆ ತೋಟದಲ್ಲಿ ಪತ್ತೆಮಾಡಿ, ಹೆತ್ತವರ ಮಡಿಲಿಗೆ ಮರಳಿ ಸೇರಿಸಿದ್ದಾರೆ. ಪೊಲೀಸರ ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಘಟನೆ ಸಂಬಂಧ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!