Monday, August 4, 2025
!-- afp header code starts here -->
Homeಇತರೆಬೆಂಗಳೂರು: ಉತ್ತರಾಖಂಡದ ಶಾಸ್ತ್ರತಾಳ್ ಗೆ  ಟ್ರೆಕ್ಕಿಂಗ್ ಗೆ ತೆರಳಿದ್ದ 9 ಮಂದಿ ಕನ್ನಡಿಗರು ಸಾವು

ಬೆಂಗಳೂರು: ಉತ್ತರಾಖಂಡದ ಶಾಸ್ತ್ರತಾಳ್ ಗೆ  ಟ್ರೆಕ್ಕಿಂಗ್ ಗೆ ತೆರಳಿದ್ದ 9 ಮಂದಿ ಕನ್ನಡಿಗರು ಸಾವು

ಬೆಂಗಳೂರು: ಉತ್ತರಾಖಂಡದ ಶಾಸ್ತ್ರತಾಳ್ ಗೆ  ಟ್ರೆಕ್ಕಿಂಗ್ ಗೆ ತೆರಳಿದ್ದ 9 ಮಂದಿ ಕನ್ನಡಿಗರು ಸಾವನ್ನಪ್ಪಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದ್ದಾರೆ. ಹವಾಮಾನ ವೈಪರಿತ್ಯದಿಂದಾಗಿ ಅವರೆಲ್ಲಾ ಮೃತಪಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ನಾನು ಈಗ ಡೆಹ್ರಾಡೂನ್ ನ ರಾಜ್ಯ ಅತಿಥಿ ಗೃಹದಲ್ಲಿರುವ 8 ಜನರ ಗುಂಪನ್ನು ಭೇಟಿಯಾಗಿ ಸಂವಾದ ನಡೆಸಿದ್ದೇನೆ. ಅವರೆಲ್ಲರೂ ಸಾಮಾನ್ಯ ಆರೋಗ್ಯದಲ್ಲಿದ್ದಾರೆ. ಹವಾಮಾನಕ್ಕೆ ವೈಪರಿಕ್ಯಕ್ಕೆ ಒಳಪಟ್ಟು ಸಾವನ್ನಪ್ಪಿದ್ದಾರೆ ಎಂದಿದ್ದಾರೆ. ಇನ್ನೂ ಐದು ಜನರು ಡೆಹ್ರಾಡೂನ್ ತಲುಪಲಿದ್ದಾರೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿರುವ ವಿವಿಧ ಅಧಿಕಾರಿಗಳೊಂದಿಗೆ ನಾನು ಚರ್ಚಿಸಿದ್ದೇನೆ ಎಂದು ತಿಳಿಸಿದ್ದಾರೆ.

ಹವಾಮಾನ ವೈಪರಿತ್ಯದ ಕಾರಣಕ್ಕಾಗಿ ಕರ್ನಾಟಕದ 9 ಮಂದಿ ಸಾವನ್ನಪ್ಪಿದ್ದಾರೆ. ಎಲ್ಲಾ 9 ಶವಗಳಲ್ಲಿ 5 ಶವಗಳು ಉತ್ತರಕಾಶಿಯಲ್ಲಿ ಮತ್ತು ಇನ್ನೂ 4 ಶವಗಳು ಚಾರಣ ಮಾರ್ಗದಲ್ಲಿದಲ್ಲಿದ್ದು ಡೆಹ್ರಾಡೂನ್ ಗೆ  ಸಾಗಿಸಲು ನಾವು ಸ್ಥಳೀಯ ಅಧಿಕಾರಿಗಳೊಂದಿಗೆ ಕೆಲಸ ಮಾಡುತ್ತಿದ್ದೇವೆ. ಸಾಧ್ಯವಾದಷ್ಟು ಬೇಗ ಶವಗಳನ್ನು ಬೆಂಗಳೂರಿಗೆ ಸಾಗಿಸಲು ನಾವು ವ್ಯವಸ್ಥೆ ಮಾಡುತ್ತಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ಇನ್ನು 9 ಮಂದಿ ಕನ್ನಡಿಗರು ಸಾವನ್ನಪ್ಪಿರೋದಕ್ಕೆ ಸಿಎಂ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ  ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು ತ್ತರಾಖಂಡದ ಶಾಸ್ತ್ರತಾಳ್ ನಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಚಾರಣಕ್ಕೆ ತೆರಳಿದ್ದ ರಾಜ್ಯದ ಚಾರಣಿಗರು ಮೃತಪಟ್ಟ ಸುದ್ದಿ ತಿಳಿದು ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಈಗಾಗಲೇ ರಕ್ಷಣಾ ಕಾರ್ಯಾಚರಣೆಯ ಮೂಲಕ 11 ಜನರನ್ನು ಸುರಕ್ಷಿತ ಪ್ರದೇಶಕ್ಕೆ ವಾಪಸು ಕರೆತರಲಾಗಿದ್ದು, ಇನ್ನೂ ಕೆಲವು ಚಾರಣಿಗರ ರಕ್ಷಣೆ ಆಗಬೇಕಿದೆ. ಪ್ರತಿಕೂಲ ಹವಾಮಾನವು ರಕ್ಷಣಾ ಕಾರ್ಯಕ್ಕೆ ತೀವ್ರ ಅಡಚಣೆ ಉಂಟುಮಾಡುತ್ತಿದ್ದು, ಎಲ್ಲರನ್ನೂ ಸುರಕ್ಷಿತವಾಗಿ ಕರೆತರಲು ನಮ್ಮ ಸರ್ಕಾರವು ಶಕ್ತಿಮೀರಿ ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ. ಸಚಿವರಾದ ಕೃಷ್ಣಬೈರೇಗೌಡ ಅವರಿಗೆ ಇಂದೇ ಡೆಹ್ರಾಡೂನ್‌ಗೆ ತೆರಳಿ ರಕ್ಷಣಾ ಕಾರ್ಯದ ಉಸ್ತುವಾರಿ ವಹಿಸುವಂತೆ ಸೂಚಿಸಿದ್ದೇನೆ. ಸ್ಥಳೀಯವಾಗಿ ಲಭ್ಯವಿರುವ ಹೆಲಿಕಾಪ್ಟರ್‌ಗಳು ಹಾಗೂ ಸೇನಾ ಹೆಲಿಕಾಪ್ಟರ್ ಗಳನ್ನು ಬಳಕೆ ಮಾಡಿಕೊಂಡು ಅಪಾಯದಲ್ಲಿ ಸಿಲುಕಿರುವ ಕನ್ನಡಿಗರನ್ನು ಮರಳಿ ಗೂಡು ಸೇರಿಸಲಾಗುವುದು ಎಂದು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!