ಚಿಕ್ಕಮಗಳೂರು: ನೂರಾರು ವರ್ಷಗಳ ಇತಿಹಾಸವನ್ನು ಹೊಂದಿರುವ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಭಂಡಿಗಡಿ ಅಂಚೆ ಕಚೇರಿಯನ್ನು ಗ್ರಾಮ ಪಂಚಾಯಿತಿಯಿಂದ ನೂತನ ಕಟ್ಟಡವನ್ನು ನಿರ್ಮಿಸಿ ವರ್ಗಾಯಿಸಲಾಗಿದೆ.
ಹೌದು .. ಇಂದು( ಆಗಸ್ಟ್ 28) ಭಂಡಿಗಡಿ ಗ್ರಾಮ ಪಂಚಾಯಿತಿಯಿಂದ ನಿರ್ಮಿಸಲಾದ ನೂತನ ಕಟ್ಟಡಕ್ಕೆ ವರ್ಗಾಯಿಸಲಾಗಿದೆ.
ಈ ಸಂಧರ್ಭದಲ್ಲಿ ಭಂಡಿಗಡಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಸದಸ್ಯರು, ಪೋಸ್ಟ್ ಮಾಸ್ಟರ್ ಶ್ರೀ ರಾಘವೇಂದ್ರ ,ದಿವಾಕರ್ ಭಟ್, ಎಸ್ಡಿಎಂಸಿ ಅಧ್ಯಕ್ಷರು, ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು. ಇದೇ ವೇಳೆ ಎಲ್ಲರಿಗೂ ಸಿಹಿ ಹಂಚುವ ಕಾರ್ಯಕ್ರಮವು ಕೂಡ ನಡೆಯಿತು.
ಹಾಗೆ ಅಂಚೆ ಕಚೇರಿ ನಡೆಸಲು ಸಹಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಭಂಡಿಗಂಡಿ ಆಡಳಿತ ಮಂಡಳಿ ಹಾಗೂ ಶಿಕ್ಷಕರಿಗೆ ಕೃತಜ್ಞತೆ ಸಲ್ಲಿಸಲಾಯಿತು.
