ಶಿವಮೊಗ್ಗ : ಸರ್ಕಾರಕ್ಕೆ ಸಲ್ಲಿಕೆಯಾಗಿರುವ ಕೋವಿಡ್ ರಿಪೋರ್ಟ್‌ನಲ್ಲಿ ಏನಿದೆ ಗೊತ್ತಿಲ್ಲ. ಕ್ಯಾಬಿನೆಟ್‌ನಲ್ಲಿ ಈ ಬಗ್ಗೆ ಇಂದು ಚರ್ಚೆ ನಡೆಯುತ್ತಿದೆ ಎಂಬ ಬಗ್ಗೆ ಮಾಧ್ಯಮದಲ್ಲಿ ನೋಡಿದ್ದೇನೆ. ಕೆಂಪಣ್ಣ ಆಯೋಗದ ವರದಿ ಬಗ್ಗೆ ಕ್ಯಾಬಿನೆಟ್‌ನಲ್ಲಿ ಇಟ್ಟು ಅದನ್ನು ಚರ್ಚೆ ಮಾಡಲಿ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಅದನ್ನು ಏಕೆ ಕ್ಯಾಬಿನೆಟ್ ಮುಂದೆ ತರದೇ ಬಿಟ್ಟಿದ್ದಾರೆ. ಮುಡಾ ಹಗರಣ, ಆಯುಕ್ತ ದಿನೇಶ್ ಕುಮಾರ್ ಅಮಾನತು ವಿಚಾರ ಈ ಬಗ್ಗೆ ಮಾಧ್ಯಮದವರಿಗೆ ಎಲ್ಲಾ ಗೊತ್ತಿದೆ. ಮಾಧ್ಯಮದವರೇ ಎಲ್ಲಾ ಹೇಳ್ತಿದ್ದಾರೆ. ಈಗಾಗಲೇ ಹೈಕೋರ್ಟ್‌ನಲ್ಲಿ ಈ ವಿಷಯಕ್ಕೆ ಸಂಬಂಧಿಸಿದಂತೆ ವಾದ ಪ್ರತಿವಾದ ಆಗಿದೆ ಎಂದರು.
ಸಿದ್ದರಾಮಯ್ಯ ಅವರ ಪರ ವಕೀಲರು ವಾದ ಮಾಡಲು ಇನ್ನೂ ಸಮಯ ಕೇಳ್ತಿದ್ದಾರೆ. ವಿಐಎಸ್‌ಎಲ್ ನಿರ್ವಹಣೆಗೆ 10-15 ಸಾವಿರ ಕೋಟಿ ಬೇಕು. ವಿಐಎಸ್‌ಎಲ್ ಹಾಗೂ ವೈಜಾಕ್ ಬಗ್ಗೆ ನಮಗೆ ಕಮಿಟ್ಮೆಂಟ್ ಇದೆ. ಆ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಯುತ್ತಿದೆ. 10-15 ಸಾವಿರ ಕೋಟಿ ಬೇಕಾಗಿರುವುದರಿಂದ ಸಮಯ ಹಿಡಿಯುತ್ತದೆ ಎಂದು ತಿಳಿಸಿದರು. ಕನ್ನಡ ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯದ ಬಗ್ಗೆ ಕೇಳಿದ ಪ್ರಶ್ನೆಗೆ ಈ ಬಗ್ಗೆ ನನಗೆ ಗೊತ್ತಿಲ್ಲ ನಾನು ಮಾತನಾಡಲ್ಲ ಎಂದುತ್ತರಿಸಿದರು.