ಮೂಡಿಗೆರೆ: ಅಯ್ಯೋಯ್ಯೋ ಖಾಸಗಿ ಬಸ್ ಸ್ಟ್ಯಾಂಡ್ ಅಥವಾ ಕೆಎಸ್ಆರ್ʼಟಿಸಿ ಬಸ್ ನಿಲ್ದಾಣ ಅಂತ ಕನ್ಫ್ಯೂಸ್ ಆಗ್ಬೇಡಿ ಇದು ಖಂಡಿತ KSRTC ಬಸ್ ಸ್ಟಾಂಡ್

ಹೌದು ನಾನಾ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಸಾರಿಗೆ ನೌಕರರು ಇಂದು ರಾಜ್ಯದಲ್ಲಿ ಬಸ್ ಓಡಾಟ ಸ್ಥಗಿತಗೊಂಡಿದ್ದು ಪ್ರಯಾಣಿಕರರಿಗೆ ತೊಂದರೆಯಾಗದಂತೆ ಜಿಲ್ಲಾಡಳಿತ ಖಾಸಗಿ ವಾಹನಗಳಿಗೆ ಅವಕಾಶ ಕಲ್ಪಿಸಿದ್ದು ಈ ಹಿನ್ನೆಲೆಯಲ್ಲಿ ಮೂಡಿಗೆರೆ ಬಸ್ ಘಟಕ ವ್ಯವಸ್ಥಾಪಕ ಮಂಜುನಾಥ್ ಅವರು ಜಿಲ್ಲಾಡಳಿತ ಖಾಸಗಿ ವಾಹನಗಳ ಪ್ರವೇಶಕ್ಕೆ ಮೌಖಿಕವಾಗಿ ತಿಳಿಸಿದ್ದು ಈ ದೃಷ್ಟಿಯಿಂದ ಖಾಸಗಿ ವಾಹನಗಳಿಗೆ ಬಸ್ ಸ್ಟಾಂಡ್ ನಲ್ಲಿ ಅವಕಾಶ ನೀಡಿರುವುದಾಗಿ ತಿಳಿಸಿದರು.
ಹಾಗಾಗಿ ಇಂದು ಮೂಡಿಗೆರೆ ಬಸ್ ನಿಲ್ದಾಣದಲ್ಲಿ ಖಾಸಗಿ ವಾಹನಗಳ ಕಲರವ ಎದ್ದು ಕಾಣುತ್ತಿದೆ.