Thursday, February 12, 2026
Homeಇತರೆಹೈಕೋರ್ಟ್‌ನಲ್ಲಿ ಅರ್ಜಿ ತಿರಸ್ಕಾರ - ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಮೊದಲ ಪ್ರತಿಕ್ರಿಯೆ..!

ಹೈಕೋರ್ಟ್‌ನಲ್ಲಿ ಅರ್ಜಿ ತಿರಸ್ಕಾರ – ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಮೊದಲ ಪ್ರತಿಕ್ರಿಯೆ..!

ಪಬ್ಲಿಕ್‌ ಇಂಪ್ಯಾಕ್ಟ್‌ ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಸಿದ ಪ್ರಕರಣ ಸಂಬಂಧ ಸಿಬಿಐ ತನಿಖೆಗೆ ನೀಡಿದ್ದ ಆದೇಶವನ್ನು ರಾಜ್ಯ ಸರ್ಕಾರ ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸಿಬಿಐ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ತಿರಸ್ಕರಿಸಿದೆ.
ಈ ಬಗ್ಗೆ ಶಾಸಕ ಬಸನಗೌಡ ಯತ್ನಾಳ್‌ ಪ್ರತಿಕ್ರಿಯಿಸಿದ್ದು, ಘನ ನ್ಯಾಯಾಲಯದ ತೀರ್ಪನ್ನು ಗೌರವಿಸುತ್ತೇನೆ. ಸುಪ್ರೀಂ ಕೋರ್ಟ್‌ನಲ್ಲಿ ಇದನ್ನು ಪ್ರಶ್ನಿಸುತ್ತೇವೆ. ಭ್ರಷ್ಟಾಚಾರದ ವಿರುದ್ಧ ನಮ್ಮ ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ. ಈ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ನಾವು ಕೊಂಡೊಯ್ಯುತ್ತೇವೆ ಅಂತ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಾಕಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!