Sunday, March 29, 2026
HomeಇತರೆRSSನ ಸಂವಿಧಾನ ದ್ವೇಷಿ ಸಿದ್ಧಾಂತವನ್ನು BJP ಭಾರತೀಯರ ಮೇಲೆ ಹೇರುತ್ತಿದೆ - ಸಿ.ಎಂ ಸಿದ್ದರಾಮಯ್ಯ ಆಕ್ರೋಶ

RSSನ ಸಂವಿಧಾನ ದ್ವೇಷಿ ಸಿದ್ಧಾಂತವನ್ನು BJP ಭಾರತೀಯರ ಮೇಲೆ ಹೇರುತ್ತಿದೆ – ಸಿ.ಎಂ ಸಿದ್ದರಾಮಯ್ಯ ಆಕ್ರೋಶ

ಬೆಳಗಾವಿ : ಸಂವಿಧಾನ ದ್ವೇಷಿಯಾಗಿರುವ RSS ಸಿದ್ಧಾಂತವನ್ನು BJP ಭಾರತೀಯರ ಮೇಲೆ ಹೇರುತ್ತಿದ್ದು ಇದನ್ನು ಹಿಮ್ಮೆಟ್ಟಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ʼಜೈ ಬಾಪು-ಜೈ ಭೀಮ್- ಜೈ ಸಂವಿಧಾನʼ ಅಭಿಯಾನ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. BJP ಪರಿವಾರ ಭಾರತದಲ್ಲಿ ಬಹಳ ವ್ಯವಸ್ಥಿತವಾಗಿ ಒಡಕು ತರುತ್ತಿದೆ. ಭಾರತೀಯರ ನಡುವೆ ಬಿರುಕು ಮೂಡಿಸುತ್ತಾ ಭಾರತವನ್ನು ದುರ್ಬಲಗೊಳಿಸುತ್ತಿದೆ. ಬಿಜೆಪಿಯ ಈ ಯತ್ನವನ್ನು ನಾವು ಸೋಲಿಸಬೇಕು. ಇದಕ್ಕೆ ಗಾಂಧಿ-ಅಂಬೇಡ್ಕರ್ ನಮಗೆ ಮಾರ್ಗದರ್ಶಕರು ಎಂದರು.
ಸಂವಿಧಾನ ಜಾರಿಯಾದಾಗ ಬಿಜೆಪಿ ಪರಿವಾರ ಅಂಬೇಡ್ಕರ್ ಭಾವಚಿತ್ರವನ್ನು, ಸಂವಿಧಾನವನ್ನು ಸುಟ್ಟಿತ್ತು. ಇದನ್ನು ಈ ದೇಶ, ಈ ದೇಶದ ಜನ ಸಮುದಾಯ ಯಾವತ್ತೂ ಕ್ಷಮಿಸುವುದಿಲ್ಲ, ಮರೆಯುವುದಿಲ್ಲ. ಹಲವು ಭಾಷೆ, ಹಲವು ಜಾತಿ, ಹಲವು ಧರ್ಮ‌ ಭಾರತದ ಶಕ್ತಿ.
BJP ಪರಿವಾರ ಗಾಂಧಿ, ಅಂಬೇಡ್ಕರ್‌ರನ್ನು ದ್ವೇಷಿಸುತ್ತದೆ. ನಾವು ಇಬ್ಬರ ಆಶಯಗಳನ್ನೂ ಪೀಳಿಗೆಯಿಂದ ಪೀಳಿಗೆಗೆ ದಾಟಿಸುತ್ತೇವೆ, ವಿಸ್ತರಿಸುತ್ತೇವೆ ಎಂದರು.‌
ನಮಗೆ ಚುನಾವಣೆ ಗೆಲ್ಲುವುದಕ್ಕಿಂತ ನಮ್ಮ ಸಿದ್ಧಾಂತ ಗೆಲ್ಲಬೇಕು. ಅದು ಮಾತ್ರ ನಮ್ಮ ನಿಜವಾದ ಗೆಲುವು. ಗಾಂಧಿ ಅಂಬೇಡ್ಕರ್ ಅವರ ಆಶಯಗಳು, ಮೌಲ್ಯಗಳ ಈಡೇರಿಕೆಗೆ ನಾವು ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದ್ದೇವೆ. ಇದಕ್ಕಾಗಿ ಬಜೆಟ್‌ನಲ್ಲಿ 52 ಸಾವಿರ ಕೋಟಿಗೂ ಅಧಿಕ ಮೊತ್ತದ ಹಣವನ್ನು ನೇರವಾಗಿ ಜನರ ಖಾತೆಗೆ ಹಾಕಿ ರಾಜ್ಯದ ಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸಿದ್ದೇವೆ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!