ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ನಾಳೆ (ಏಪ್ರಿಲ್ 3) ನಾಮಪತ್ರ ಸಲ್ಲಿಸಲಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ನಾಳೆ ಬೆಳಿಗ್ಗೆ 10 ಗಂಟೆಗೆ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಪೂರ್ವಭಾವಿಯಾಗಿ ಪಕ್ಷದ ಕಾರ್ಯಕರ್ತರ ಬೃಹತ್ ಸಮಾವೇಶ ನಡೆಯಲಿದೆ.
ಇನ್ನು ಬೆಳಗ್ಗೆ 11 ಗಂಟೆಗೆ ಕಾಂಗ್ರೆಸ್ ಕಚೇರಿಯಲ್ಲಿ ಸಣ್ಣ ಸಭೆ ನಡೆಸಿ ಬಳಿಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ನಡೆಯಲಿದೆ.