Friday, March 27, 2026
Homeಇತರೆದತ್ತ ಜಯಂತಿ ಕಾರ್ಯಕ್ರಮದ ಪೂರ್ವಪೂರ್ವ ಭಾವಿ ಸಭೆ

ದತ್ತ ಜಯಂತಿ ಕಾರ್ಯಕ್ರಮದ ಪೂರ್ವಪೂರ್ವ ಭಾವಿ ಸಭೆ

ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮಾಹಿತಿ

ಚಿಕ್ಕಮಗಳೂರು: ನ. ೨೨: ಡಿಸೆಂಬ‌ರ್ ೧೨ ರಿಂದ ೧೪ ರವರೆಗೆ ನಡೆಯುವ ದತ್ತ ಜಯಂತಿ ಕಾರ್ಯಕ್ರಮವನ್ನು ಶಾಂತಿಯುತವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್‌. ತಿಳಿಸಿದರು.

ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಿನ್ನೆ ನಡೆದ ದತ್ತ ಜಯಂತಿ ಕಾರ್ಯಕ್ರಮದ ಪೂರ್ವಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಸರ್ಕಾರ ಮತ್ತು ನ್ಯಾಯಾಲಯದ ನಿರ್ದೇಶನದಂತೆ ವ್ಯವಸ್ಥಾಪನ ಸಮಿತಿ ಮೂಲಕ ಮೂರು ದಿನಗಳ ಕಾಲ ವಿವಿಧ ಪೂಜಾ ಕಾರ್ಯಕ್ರಮಗಳು ನಡೆಯಲಿದ್ದು, ಇದಕ್ಕೆ ಬೇಕಾದ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ತಿಳಿಸಿದ ಅವರು. ದತ್ತ ಜಯಂತಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಲು ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ವಿವಿಧ ಜವಾಬ್ದಾರಿಗಳನ್ನು ನೀಡಲಾಗಿದ್ದು, ರಸ್ತೆ, ಕುಡಿಯುವ ನೀರು, ಪಾರ್ಕಿಂಗ್,ಜವಾಬ್ದಾರಿಗಳನ್ನು ನೀಡಲಾಗಿದ್ದು, ರಸ್ತೆ, ಕುಡಿಯುವ ನೀರು, ಪಾರ್ಕಿಂಗ್, ತಾತ್ಕಾಲಿಕ ಶೌಚಾಲಯ ವ್ಯವಸ್ಥೆ ಹಾಗೂ ಅಪಾಯಕಾರಿ ಸ್ಥಳಗಳಲ್ಲಿ ಸೂಚನಾ ಫಲಕಗಳನ್ನು ಆಳವಡಿಸುವಂತೆ, ಆರೋಗ್ಯ ಸೇವೆ ಮತ್ತು ವಾಹನಗಳ ವ್ಯವಸ್ಥೆ ಮಾಡಿಕೊಳ್ಳುವಂತೆ ತಿಳಿಸಿದ ಅವರು ಕಾರ್ಯಕ್ರಮ ಶಾಂತಿ ಮತ್ತು ವ್ಯವಸ್ಥಿತವಾಗಿ ನಡೆಯಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.ವ್ಯವಸ್ಥಾಪನ ಸಮಿತಿಯು ಪೂಜಾ

ವಿಧಿ ವಿಧಾನಗಳನ್ನು ಮಾಡಲು ಎಲ್ಲಾ

ರೀತಿಯ ಸಹಕಾರವನ್ನು

ನೀಡಲಾಗಿದ್ದು, ಬರುವ ಭಕ್ತರಿಗೆ

ಅಗತ್ಯ ಮೂಲಭೂತ ಸೌಕರ್ಯ

ಸೇರಿದಂತೆ ಡಿಸೆಂಬರ್ ೧೨ ರಂದು

ಅನುಸೂಯ ಜಯಂತಿ ಮತ್ತು ೧೪

ರಂದು ದತ್ತ ಜಯಂತಿಗೆ ಐ.ಡಿ.

ಪೀಠಕ್ಕೆ ಬರುವ ಭಕ್ತಾಧಿಗಳಿಗೆ

ಪ್ರಸಾದ ವ್ಯವಸ್ಥೆ ಮಾಡಲಾಗುವುದು.

ಹೊರ ಜಿಲ್ಲೆಗಳಿಂದ ಬರುವ ಭಕ್ತರು

ಲಾಂಗ್ ಚಾರ್ಸಿ ಬಸ್ ಅಥವಾ ಇತರೆ

ವಾಹನಗಳನ್ನು ಬಳಸದೆ ಸಣ್ಣ ಸಣ್ಣ

ವಾಹನಗಳಲ್ಲಿ ಬಂದು ದರ್ಶನ

ಮಾಡಬೇಕು. ವಾಹನಗಳಿಗೆ

ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದ್ದು,

ಅದೇ ಸ್ಥಳದಲ್ಲಿ ವಾಹನಗಳನ್ನು. ವಾಹನಗಳಿಗ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದ್ದು, ಅದೇ ಸ್ಥಳದಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡಬೇಕು. ಭಕ್ತರ ಅನುಕೂಲಕ್ಕಾಗಿ ಸೂಚನಾ ಫಲಕಗಳನ್ನು ಆಳವಡಿಸಲಾಗುವುದು. ಅವುಗಳನ್ನು ಪಾಲಿಸುವಂತೆ ಹಾಗೂ ಬರುವ ಭಕ್ತರು ಯಾವುದೇ ಕಾರಣಕ್ಕೂ ಅಹಿತಕರ ವಾತಾವರಣ ಉಂಟಾಗದಿರುವಂತೆ ಸಹಕರಿಸಬೇಕು ಎಂದರು.ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ವಿಕ್ರಂ ಅಮಟೆ ಮಾತನಾಡಿ ದತ್ತ ಜಯಂತಿ ಕಾರ್ಯಕ್ರಮದ ಭದ್ರತೆಗಾಗಿ ಹೊರ ಜಿಲ್ಲೆಗಳಿಂದ ಬರುವ ಪೊಲೀಸ್‌ ಸಿಬ್ಬಂದಿಗಳಿಗೆ ಆರೋಗ್ಯ ಪರೀಕ್ಷೆ ಮಾಡಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ತಿಳಿಸಿದ ಅವರು ಕೆಎಸ್‌ಆರ್‌ಟಿಸಿ ಯಿಂದ ಮಿನಿ ಬಸ್‌ಗಳನ್ನು ವ್ಯವಸ್ಥೆ ಮಾಡಬೇಕು. ೩ ದಿನಗಳು ವಿದ್ಯುತ್ ಕಡಿತವಾಗದಂತೆ ಮೆಸ್ಕಾಂ ಇಲಾಖೆ ಅಧಿಕಾರಿಗಳು ಕ್ರಮವಹಿಸುವಂತೆ ತಿಳಿಸಿದರು.ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಚ್.ಎಸ್. ಕೀರ್ತನಾ, ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಕೃಷ್ಣಮೂರ್ತಿ, ಉಪವಿಭಾಗಾಧಿಕಾರಿ ದಲ್ಟಿತ್ ಕುಮಾ‌ರ್, ತಹಸೀಲ್ದಾ‌ರ್ ಡಾ. ಸುಮಂತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವಥ್‌ ಬಾಬು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವ್ಯವಸ್ಥಾಪನ ಸಮಿತಿ ಅಧ್ಯಕ್ಷರು ಸದಸ್ಯರು ಹಾಗೂ ವಿವಿಧ ಸಂಘಟನೆಗಳ ಪ್ರಮುಖ ಮುಖಂಡರು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!