ಚಿಕ್ಕಮಗಳೂರು: ಮಕ್ಕಳಲ್ಲಿ ಕಲೆ, ಸಾಹಿತ್ಯ
ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಅರಿ ವಿಲ್ಲದೇ ಹುದುಗಿರುತ್ತವೆ. ಅವುಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯ ಪಾಲಕರು ಹಾಗೂ ಶಿಕ್ಷಕರ ಕರ್ತವ್ಯ ಎಂದು ಆದಿ ಚುಂಚನಗಿರಿ ಶಿಕ್ಷಣ ಟ್ರಸ್ಟ್‌ನ ಕಾರ್ಯದರ್ಶಿ ಶ್ರೀ ಗುಣನಾಥಸ್ವಾಮೀಜಿ ಹೇಳಿದರು.

ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಸಮನ್ವಯ ಸಂಪನ್ಮೂಲ ಕೇಂದ್ರ ಸಹಯೋಗದಲ್ಲಿ ನಗರದ ಹೌಸಿಂಗ್ ಬೋರ್ಡ್ ಸಮಿಪ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ, ಕಲೋತ್ಸವ ಕಾರ್ಯಕ್ರಮವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು.
ಮಕ್ಕಳಿಗೆ ಬಾಲ್ಯದಿಂದಲ್ಲೇ ಒಂದಿಲ್ಲೊಂದು ವಿಷಯಗಳಲ್ಲಿ ಆಸಕ್ತಿ ಹೊಂದಿರುವುದು ಸಹಜ. ಆ ಕಲಾಸಕ್ತಿ ಯನ್ನು ಸಮಾಜದ ಮುಂಚೂಣಿಗೆ ತರುವ ನಿಟ್ಟಿನಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯ. ವಿದ್ಯಾರ್ಥಿಗಳ ಜೀವನದಲ್ಲೇ ಕಲೆಯನ್ನು ಪ್ರೋತ್ಸಾಹಿಸಿ ಗೌರವಿಸುವ ಕಾರ್ಯ
ವಾಗಬೇಕಿದೆ ಎಂದರು.
ಪ್ರತಿಭಾ ಕಾರಂಜಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಜನ್ಮವಿತ್ತ ಪುಣ್ಯಭೂಮಿ. ಮಕ್ಕಳು ಪಠ್ಯದ ಜೊತೆಗೆ ಶೈಕ ಕ್ಷಣಿಕ, ಸಾಮಾಜಿಕವಾಗಿ ಬೆಳವಣಿಗೆ ಹೊಂದುವ ದೃಷ್ಟಿಯಿಂದ ಶಿಕ್ಷಣ ಮಂತ್ರಿ ಗೋವಿಂದೇಗೌಡ ಕಾಲದಲ್ಲಿ ಮಕ್ಕಳ ಮೇಳ ಎಂಬ ಹೆಸರಿನಲ್ಲಿ ಆರಂಭಗೊಂಡು ಇದೀಗ ರಾಜ್ಯಾದ್ಯಂತ ಪ್ರತಿಭಾ ಕಾರಂಜಿ ರೂಪದಲ್ಲಿ ವಿದ್ಯಾರ್ಥಿಗಳ ಪ್ರತಿಭೆಗೆ ಪ್ರೋತ್ಸಾಹಿಸುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತ ನಾಡಿದ
ಅವರು ತೀರ್ಪುಗಾರರು ಕಾರಂಜಿ ಯಲ್ಲಿ ಸ್ಪರ್ಧಿಸಿದ ಮಕ್ಕಳಿಗೆ ಸಮಗ್ರ ಕಲೆ ಗುರುತಿಸಿ ಪ್ರಾಮಾಣಿಕಾಗಿ ಆಯ್ಕೆಗೊಳಿಸಿದರೆ ಭವಿಷ್ಯ ದಲ್ಲಿ ಆ ವಿದ್ಯಾರ್ಥಿ ಸಮಾಜದಲ್ಲಿ ಉನ್ನತ ಸ್ಥಾನಮಾನ ಗಳಿಸಲು ಸಾಧ್ಯವೆಂದರು.
ನಗರಸಭೆ ಸದಸ್ಯೆ ಕವಿತಾಶೇಖರ್ ಮಾತನಾಡಿ ವಿದ್ಯಾಭ್ಯಾಸದಲ್ಲಿನ ಮಕ್ಕಳ ಬದುಕು ಖಾಲಿಚೀಲ ಇದ್ದಂತೆ. ಶಿಕ್ಷಣ, ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆ ఎంబ ಜ್ಞಾನಭಂಡಾರವನ್ನು ವಿದ್ಯಾರ್ಥಿಗಳಿಗೆ ಶಿಕ್ಷಕರು ತುಂಬಿಸಿ ಬಾಲ್ಯದಲ್ಲಿಯೇ ವಿದ್ಯಾರ್ಜನೆಗೆ ಪೂರಕವಾಗಿ ಕಾರ್ಯನಿರ್ವಹಿಸಬೇಕೆಂದು ಹೇಳಿದರು.
ಶಾಸಕ ಹೆಚ್.ಡಿ.ತಮ್ಮಯ್ಯ, ವಿದ್ಯಾರ್ಥಿಗಳ ಸೃಜನಶೀಲತೆ ಹೊರತರುವ ಉದ್ದೇಶದಿಂದ ಸರ್ಕಾರ ಪ್ರತಿಭಾ ಕಾರಂಜಿ ಆಯೋಜಿಸಲಾಗಿದೆ. ವಿಜೇತರಾದವರು ಜಿಲ್ಲಾ, ರಾಜ್ಯ ಮಟ್ಟದಲ್ಲಿ ಸ್ಪರ್ಧಿಸಬಹುದು. ಸೋಲುಂಡವರು ದೃತಿಗೆಡದೇ ಭಾಗವಹಿಸಿರುವ ಅನುಭವವೇ ದೊಡ್ಡದೆಂದು ಅರಿತು ಮುಂದಿನ ಪ್ರಯತ್ನಕ್ಕೆ ಅಣಿಯಾಗಬೇಕೆಂದು ಸಲಹೆ ನೀಡಿದರು.
ವಿದ್ಯಾರ್ಥಿಗಳಿಗೆ ಬಾಲ್ಯದಲ್ಲಿ ಪ್ರತಿಭಾ ಕಾರಂಜಿ ಆಯೋಜಿಸುವ ಉದ್ದೇಶವೇ ನಾಯಕತ್ವ ಗುಣ ಬೆಳೆಸುವುದಕ್ಕಾಗಿ ಎಂದ
ಆದಿಚುಂಚನಗಿರಿ ಪಿಯು ಕಾಲೇಜು ಪ್ರಾಂಶುಪಾಲ ಸುರೇಂದ್ರ, ಪ್ರೌಢಶಾಲಾ ಪ್ರಾಂಶುಪಾಲ ಜಿ.ಆರ್.ಚಂದ್ರಶೇಖರ್, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಸಿ.ರವೀಶ್, ಶಿಕ್ಷಣ ಸಂಯೋಜಕ ಟಿ.ಜಿ. ಕೃಷ್ಣಮೂರ್ತಿ ರಾಜ್ ಅರಸ್, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಚಂದ್ರನಾಯ್ಕ್, ತಾಲೂಕು ಅಧ್ಯಕ್ಷ ಗಂಗಾಧರ್, ಕಾರ್ಯದರ್ಶಿ ಪ್ರಹ್ಲಾದ್, ಸಹಾಯಕ ಶಿಕ್ಷಕರ ತಾಲೂಕು ಅಧ್ಯಕ್ಷ ಮಂಜುನಾಥ್, ಕಾರ್ಯದರ್ಶಿ ಉಮೇಶ್ ಇದ್ದರು.
